ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಶುಕ್ರವಾರ ಹೈಕೋರ್ಟ್ ನಟ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು. ಆದರೆ ಕೆಲವು ಕಾನೂನು ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಇಂದು ಡಿ ಗ್ಯಾಂಗ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಹೌದು ಕಳೆದ ಶುಕ್ರವಾರ ಕೊಲೆ ಆರೋಪಿಯಾಗಿರುವಂತಹ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಅನುಕುಮಾರ್, ಪ್ರದೋಷ್ ಜಗದೀಶ್, ಲಕ್ಷ್ಮಣ್ ಹಾಗೂ ನಾಗರಾಜುಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಇತ್ತ ಬೆನ್ನು ನೋವಿನ ಸಮಸ್ಯೆ ತಿಳಿಸಿ ಬಳ್ಳಾರಿ ಜಿಲ್ಲೆಯ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಎಂದು ದಾಖಲಾಗಿದ್ದರು. ಈ ವೇಳೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿತ್ತು.
ಈ ಒಂದು ಪ್ರಕರಣದಲ್ಲಿ ಜಾಮೀನು ಪಡೆದುಕೊಂಡ ಆರೋಪಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇದ್ದಾರೆ.
ಪವಿತ್ರಾಗೌಡ ಅನು ಕುಮಾರ್ ಪ್ರದೋಷ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರೆ, ಇನ್ನೂ ಜಗದೀಶ್ ಮತ್ತು ಲಕ್ಷ್ಮಣ್ ತುಮಕೂರಿನ ಜೈಲಿನಲ್ಲಿ ಇದ್ದಾರೆ. ಅಲ್ಲದೇ ನಾಗರಾಜು ಕಲ್ಬುರ್ಗಿಯ ಕೇಂದ್ರ ಕಾರಾಗೃಹ ಜೈಲಿನಲ್ಲಿ ಇದ್ದಾರೆ.