ನವದೆಹಲಿ : ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸಾಂವಿಧಾನಿಕ ತಿದ್ದುಪಡಿ ಮಸೂದೆಗಳನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಮಂಡಿಸಿದರು.
ಕಾನೂನು ಸಚಿವರು ಸಂವಿಧಾನ ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆ, 2024 ಅನ್ನು ಪರಿಚಯಿಸುವ ನಿರ್ಣಯವನ್ನು ಮಂಡಿಸುತ್ತಿದ್ದಂತೆ ಪ್ರತಿಪಕ್ಷಗಳು ಮತ ವಿಭಜನೆಯನ್ನು ಕೋರಿದವು. ಮಸೂದೆ ಪರವಾಗಿ 269 ಮತ್ತು ವಿರುದ್ಧವಾಗಿ 198 ಸದಸ್ಯರು ಮತ ಚಲಾಯಿಸಿದರು.
ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸಂಸದರು ತೀವ್ರ ವಾಗ್ದಾಳಿ ನಡೆಸಿದರು. ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಮಸೂದೆಗಳನ್ನು ವಿರೋಧಿಸಿದ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಅವು ಸಂವಿಧಾನದ ಮೂಲ ರಚನೆಯ ಸಿದ್ಧಾಂತದ ಮೇಲೆ ದಾಳಿ ಮಾಡುತ್ತವೆ ಎಂದು ಹೇಳಿದರು.