ಬೆಳಗಾವಿ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆ ಕುರಿತಾಗಿ ಚರ್ಚೆ ನಡೆಸಲು ಡಿಸೆಂಬರ್ 21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವ ಪಕ್ಷಗಳ ಶಾಸಕರ ಸಭೆ ಕರೆದಿದ್ದಾರೆ.
ಬೆಂಗಳೂರಿನರುವ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಡಿ. 21ರಂದು ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಪಂಚಮಸಾಲಿ ಸಮುದಾಯದ ಶಾಸಕರನ್ನು ಹೊರತುಪಡಿಸಿ ಬೇರೆ ಸಮುದಾಯದ ಯಾವುದೇ ಮುಖಂಡರನ್ನು ಸಭೆಗೆ ಆಹ್ವಾನಿಸಿಲ್ಲ.
ಪ್ರವರ್ಗ 2ಎ ಗೆ ಪಂಚಮಸಾಲಿ ಸಮುದಾಯವನ್ನು ಏಕೆ ಸೇರಿಸಲು ಸಾಧ್ಯವಿಲ್ಲ? ಸೇರ್ಪಡೆ ಮಾಡಲು ಕಾನೂನಿನ ತೊಡಕು, ಬೆಳಗಾವಿಯಲ್ಲಿ ನಡೆದ ಲಾಠಿ ಚಾರ್ಜ್ ವಿಚಾರ, ಮೀಸಲಾತಿಗೆ ಪರ್ಯಾಯವಾಗಿ ಯಾವ ಕ್ರಮ ಕೈಗೊಳ್ಳಬಹುದು ಎಂಬುದು ಸೇರಿದಂತೆ ಹಲವು ವಿಚಾರಗಳ ಕುರಿತಾಗಿ ಶಾಸಕರೊಂದಿಗೆ ಸಿದ್ದರಾಮಯ್ಯ ಸಮಾಲೋಚನೆ ನಡೆಸಲಿದ್ದಾರೆ.