Ad imageAd image

ಮನುಷ್ಯರಿಂದಲೇ ಮಾನವ ಹಕ್ಕುಗಳ ಉಲ್ಲಂಘನೆ: ನ್ಯಾ. ಜಯಂತ್ ಕುಮಾರ್ ವಿಷಾಧ

Bharath Vaibhav
ಮನುಷ್ಯರಿಂದಲೇ ಮಾನವ ಹಕ್ಕುಗಳ ಉಲ್ಲಂಘನೆ: ನ್ಯಾ. ಜಯಂತ್ ಕುಮಾರ್ ವಿಷಾಧ
WhatsApp Group Join Now
Telegram Group Join Now

ತುಮಕೂರು: ಸಮಾಜದ ನೆಮ್ಮದಿಗೆ ಅಗತ್ಯವಾದ ನಡವಳಿಕೆಗಳನ್ನು ಮನುಷ್ಯ ರೂಪಿಸಿಕೊಳ್ಳುವ ಮೂಲಕ ಮಾನವ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕಿದೆ. ಆದರೆ ಮನುಷ್ಯರಿಂದಲೇ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಜಯಂತ್ ಕುಮಾರ್ ವಿಷಾಧ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ-೨೦೨೪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಪ್ರತಿಯೊಬ್ಬ ನಾಗರಿಕರು ಮಾನವ ಹಕ್ಕುಗಳ ವ್ಯಾಪ್ತಿಯನ್ನು ತಿಳಿಯುವುದು ಅವಶ್ಯಕವಾಗಿದೆ.  ಇತರರಿಗೆ ತೊಂದರೆ ಕೊಟ್ಟು ಜೀವಿಸುವಂತಹ ಕ್ರಿಯೆ, ಭಾವನೆಗಳನ್ನು ತ್ಯಜಿಸಬೇಕೆಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಮಾತನಾಡಿ, 1947 ಕ್ಕೂ ಮುಂಚೆ ಭಾರತೀಯರ ಮಾನವ ಹಕ್ಕು-ಸ್ವಾತಂತ್ರ್ಯಗಳನ್ನು ನಿರ್ಬಂಧಿಸಲಾಗಿತ್ತು. ಅಂದು ರೈತರು ತಮ್ಮ ಕೃಷಿ ಜಮೀನಿನಿಂದ ಆದಾಯ ಗಳಿಸದಿದ್ದರೂ ಕೂಡ ನಿಗಧಿತ ತೆರಿಗೆಯನ್ನು ಪಾವತಿಸಬೇಕಿತ್ತು. ಸಾರ್ವಜನಿಕರ ಪ್ರತಿಭಟನೆಗೆ ಅವಕಾಶವಿರಲಿಲ್ಲ. ಸಹಸ್ರಾರು ಭಾರತೀಯರ ಬಲಿದಾನ, ಕೋಟ್ಯಾಂತರ ಭಾರತೀಯ ಹೋರಾಟದ ಫಲವಾಗಿ ನಾವು ಸ್ವಾತಂತ್ರ್ಯವನ್ನು ಪಡೆದಿದ್ದೇವೆ. ಇಂದು ಪ್ರತಿಯೊಬ್ಬರೂ ಕೂಡ ಮುಕ್ತವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದಾಗಿದೆ. ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳನ್ನು ಅಳವಡಿಸಲಾಗಿದೆ. ಇಂದು ಅನೇಕ ಮಾನವ ಹಕ್ಕುಗಳ ಅಧಿನಿಯಮಗಳು ಜಾರಿಯಲ್ಲಿವೆ. ನಾವೆಲ್ಲರೂ ಮಾನವ ಹಕ್ಕುಗಳನ್ನು ಅರ್ಥ ಮಾಡಿಕೊಂಡು ಮಾನವೀಯ ಗುಣಗಳೊಂದಿಗೆ ಎಲ್ಲರ ಹಿತಕ್ಕಾಗಿ ಜೀವಿಸಬೇಕು. ಇದೇ ಮಾನವ ಹಕ್ಕುಗಳ ನಿಜವಾದ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆ ಕುರಿತ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಸಿ ಮತ್ತು ಪುಸ್ತಕಗಳನ್ನು ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಾದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೇಲ್ವಿಚಾರಕ ಡಿ.ವಿ. ಸುರೇಶ್ ಕುಮಾರ್, ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಮತ್ತಿತರರು ಭಾಗವಹಿಸಿದ್ದರು.

ವರದಿ: ಗಿರೀಶ್ ಕೆ ಭಟ್

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!