ಹುಬ್ಬಳ್ಳಿ : ನಗರದ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ತಗುಲಿದ ಪರಿಣಾಮ 9 ಜನ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಭಾನುವಾರ ರಾತ್ರಿ ಅಡುಗೆ ಮಾಡಿ ಸೇವಿಸಿದ ಬಳಿಕ ಮಾಲಾಧಾರಿಗಳು ಮಲಗಿದ್ದಾರೆ, ಈ ವೇಳೆ ಗ್ಯಾಸ್ ಸರಿಯಾಗಿ ಆಫ್ ಮಾಡದ ಕಾರಣ ಲೀಕ್ ಆಗಿದೆ.ಪರಿಣಾಮ ಅಲ್ಲೇ ಪಕ್ಕದಲ್ಲಿದ್ದ ದೀಪದ ಬೆಂಕಿಗೆ ತಗುಲಿ ಏಕಾಏಕಿ ಬ್ಲಾಸ್ಟ್ ಆಗಿದೆ.
ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಅದ ಹಿನ್ನಲೆ ಮಲಗಿದ್ದ 9 ಜನ ಅಯ್ಯಪ್ಪಸ್ವಾಮಿಯ ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.