ಬೆಂಗಳೂರು : ಲಕ್ಷ್ಮೀಪುರ ಕ್ರಾಸ್ ನಲ್ಲಿರುವ ಅಶೋಕ್ ಪಬ್ಲಿಕ್ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಅಶೋಕ್ ಉತ್ಸವ-2024 ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಸ್ತು ಪ್ರದರ್ಶನದಲ್ಲಿ ಶಾಲಾ ಮಕ್ಕಳು ಸ್ವತಃ ಸಿದ್ಧಪಡಿಸಿ ಪ್ರದರ್ಶನಕ್ಕೆ ಇಟ್ಟಿದ್ದ ವಿವಿಧ ರೂಪದ ವಸ್ತು ಪ್ರದರ್ಶನ ನೋಡಿ ಕಣ್ಣು ತುಂಬಿ ಕೊಂಡರು. ಈ ವೇಳೆ ಮಾತನಾಡಿದ ಕೆಬಿಸಿ ಟ್ರಸ್ಟ್ ನ ಅಧ್ಯಕ್ಷ ಹಾಗೂ ದಾಸರಹಳ್ಳಿ ನಗರಸಭೆ ಮಾಜಿ ಅಧ್ಯಕ್ಷ ಕೆ.ಸಿ ಅಶೋಕ್. ‘ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳುವುದರ ಜೊತೆಗೆ ಹೊಸದನ್ನು ಹುಡುಕಲು ಪ್ರಯತ್ನಿಸಬೇಕು. ಆಗ ಮಾತ್ರ ವ್ಯಕ್ತಿತ್ವ ವಿಕಸನ ವಾಗುತ್ತದೆ’, ಎಂದರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಭಾವಿ ಮುಖಂಡ ಹಾಗೂ ಶೆಟ್ಚಿಹಳ್ಳಿ ವಾರ್ಡ್ ನ ಮಾಜಿ ಪಾಲಿಕೆ ಸದಸ್ಯ ಕೆ. ನಾಗಭೂಷಣ್ ಮಾತನಾಡಿ, ‘ವಸ್ತು ಪ್ರದರ್ಶನಗಳು ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುತ್ತವೆ. ಯಾವುದೇ ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪಾತ್ರ ಬಹಳ ಮಹತ್ವದ್ದಾಗಿದೆ. ಕಾಲಕಾಲಕ್ಕೆ ಆಗುವ ಬದಲಾವಣೆಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳು ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಬೇಕು ‘, ಎಂದು ಹೇಳಿದರು.
ಈ ಸಂದರ್ಭದಲ್ಲಿ ವೀರ ಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಜಿ.ರಾಜೇಂದ್ರ, ದಾಸರಹಳ್ಳಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಸಿ ವೆಂಕಟೇಶ್ (ದೇವೇಗೌಡ), ಕಾಂಗ್ರೆಸ್ ಬ್ಲಾಕ್ ನೂತನ ಅಧ್ಯಕ್ಷ ನಾರಾಯಣ ಸ್ವಾಮಿ, ಸಂಸ್ಥೆಯ ಕಾರ್ಯದರ್ಶಿ ರೋಷನ್ ಅಶೋಕ್, ಅಶೋಕ್ ಪಾಲಿಟೆಕ್ನಿಕ್ ನಿರ್ದೇಶಕರಾದ ಡಾ. ಲಿಂಗರಾಜು ಜಿ.ಎಂ, ಶಾಲಾ ಆಡಳಿತಾಧಿಕಾರಿ ಡಾ.ಸುರೇಶ್ ಸೇರಿದಂತೆ , ಶಾಲಾ ಕಾಲೇಜುಗಳ ಸಿಬ್ಬಂದಿ ವರ್ಗ, ಪೋಷಕರು, ವಿದ್ಯಾರ್ಥಿಗಳು ಇದ್ದರು.
ವರದಿ : ಅಯ್ಯಣ್ಣ ಮಾಸ್ಟರ್