ಮಾನ್ವಿ:ವಕ್ಫ್ ಆಸ್ತಿಯನ್ನು ಆಲ್ದಾಳ್ ವೀರಭದ್ರಪ್ಪ ಎಂಬ ವ್ಯಕ್ತಿ ಕಬಳಿಸಿ ಪಹಣಿಯಲ್ಲಿ ನೊಂದಣಿ ಮಾಡಿಕೊಂಡಿದ್ದಾರೆ.ಹೀಗಾಗಿ ನಾನು ಕಾನೂನಿನ ಮೂಲಕ ಹೋರಾಟ ಮಾಡಲು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದೇನೆ ಎಂದು ಜನಸೇವಾ ಫೌಂಡೇಶನ್ ರಾಜ್ಯಾಧ್ಯಕ್ಷ ಜಾವಿದ್ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾನ್ವಿ ಪಟ್ಟಣದ ಸಬ್ಜಲಿ ತಾತನ ಆಸ್ತಿಯನ್ನು ಆಲ್ದಾಳ್ ವೀರಭದ್ರಪ್ಪ ಕಬಳಿಸುವುದಕ್ಕೆ ಮಾನ್ವಿ ತಹಸೀಲ್ದಾರ್ ರಾಜು ಪಿರಂಗಿ ಹಾಗು ಸಿಂದನೂರು ನೊಂದಣಿ ಅಧಿಕಾರಿಗಳು ಪ್ರಮುಖ ಕಾರಣವಾಗಿದ್ದಾರೆ ಗಂಭೀರ ಆರೋಪ ಮಾಡಿದ್ದಾರೆ.
ಸರಕಾರದ ನಿಯಮಗಳನ್ನು ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ವಕ್ಫ್ ಆಸ್ತಿ ಕಬಳಿಸಿದವರ ವಿರುದ್ಧ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರಿಗೆ ದೂರು ಸಲ್ಲಿಸಿದ್ದೇನೆ, ಈ ಸಂಬಂಧ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದರು.