ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ನಗರದ 40 ಕ್ಕೂ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿ, ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ.
ದಾಳಿಯ ವೇಳೆ ರೌಡಿಗಳ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದೆ. ಕುಳ್ಳ ಶಿವರಾಜ್ ಮನೆಯಲ್ಲಿ 10 ಮಚ್ಚು ಲಾಂಗ್ ಪತ್ತೆಯಾಗಿವೆ. ಸಿಸಿಬಿ ಪೊಲೀಸರು ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದು, ಕೆಲವರ ವಿಚಾರಣೆ ನಡೆಸಿದ್ದಾರೆ.