ಚಾಮರಾಜನಗರ : ರಾಜ್ಯ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ರವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತರು ಅಮಿತ್ ಷಾ ರವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದ ಘಟನೆ ನಡೆದಿದೆ.
ಚಾಮರಾಜನಗರದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಅಂಬೇಡ್ಕರ್ ರವರ ಬಗ್ಗೆ ಹಗುರವಾಗಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಷಾ ರವರ ವಿರುದ್ದ ಘೋಷಣೆ ಕೂಗುತ್ತಾ, ರಾಷ್ಟ್ರೀಯ ಹೆದ್ದಾರಿ ಶ್ರೀ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ನಡೆಸುತ್ತಿರುವಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಹಾಗೂ ತಳ್ಳಾಟ ನಡೆಯಿತು.
ಪೊಲೀಸರಿಗೆ ಜಗ್ಗದ ಪ್ರತಿಭಟನಾಕಾರರು ಕೇಂದ್ರ ಸಚಿವ ಅಮಿತ್ ಷಾ ರವರ ಭಾವಚಿತ್ರವಿರುವ ಫೆಕ್ಸ್ ಗೆ ಚಪ್ಪಲಿಯಲ್ಲಿ ಹೊಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ದಲಿತ ಸಮುದಾಯದ ಮುಖಂಡರು, ಗ್ರಾಮಸ್ಥರು ಹಾಗೂ ಜನಪ್ರತಿನಿದಿಗಳು ಹಾಜತಿದ್ದರು.
ವರದಿ :ಸ್ವಾಮಿ ಬಳೇಪೇಟೆ