ಅಮೆರಿಕ : ನಟ ಶಿವರಾಜ್ ಕುಮಾರ್ ಅವರಿಗೆ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಅಮೆರಿಕದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ. 6 ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ನಂತರ ಶಿವಣ್ಣ ಚೇತರಿಸಿಕೊಳ್ಳುತ್ತಿದ್ದಾರೆ.
ಭಾರತೀಯ ಕಾಲಮಾನ ಮಂಗಳವಾರ ಸಂಜೆ 6 ಗಂಟೆಗೆ ಆಪರೇಷನ್ ಆರಂಭ ಆಗಿದ್ದು 5-6 ಗಂಟೆಗಳ ಕಾಲ ನಡೆದ ಆಪರೇಷನ್ ಯಶಸ್ವಿಯಾಗಿದೆ.ಈ ಬಗ್ಗೆ ಆಪ್ತ ಮೂಲಗಳು ಮಾಹಿತಿ ನೀಡಿದೆ.
ಅಮೆರಿಕದ ಫ್ಲೋರಿಡಾದ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಸರ್ಜರಿ ನಡೆದಿದ್ದು, ಸತತ ಆರು ಗಂಟೆಗಳ ಕಾಲ ಆಪರೇಷನ್ ನಡೆಸಲಾಗಿದೆ. ಡಾ. ಮುರುಗೇಶ್ ನೇತೃತ್ವದಲ್ಲಿ ವೈದ್ಯಕೀಯ ಪ್ರಕ್ರಿಯೆ ನಡೆದಿದೆ. ರಾತ್ರಿ 11.30-12ರ ವೇಳೆಗೆ ಆಪರೇಷನ್ ಪೂರ್ಣಗೊಂಡಿದೆ ಎಂದು ಗೊತ್ತಾಗಿದೆ.
ಶಿವರಾಜ್ಕುಮಾರ್ ಅವರು ಬೇಗ ಚೇತರಿಕೆ ಕಾಣಲಿ ಎಂದು ಹೋಮ-ಹವನಗಳು ನಡೆದಿದ್ದವು. ಸಾಕಷ್ಟು ಕಡೆಗಳಲ್ಲಿ ಪೂಜೆ ಮಾಡಲಾಯಿತು. ಶಿವಣ್ಣನ ಅಭಿಮಾನಿಗಳು ದೇವರ ಮೊರೆ ಹೋಗಿದ್ದರು. ಈ ಎಲ್ಲ ಪೂಜೆ-ಪುನಸ್ಕಾರ, ಹೋಮ-ಹವನ ಹಾಗೂ ಅಭಿಮಾನಿಗಳ ಪ್ರಾರ್ಥನೆ ಫಲ ಕೊಟ್ಟಿದೆ.