ಚಿಕ್ಕೋಡಿ :ತಾಲ್ಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ನೂತನ ರೈತ ಭವನ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಅಣ್ಣಾ ಹುಕ್ಕೇರಿ ಹಾಗೂ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರ ಪ್ರಯತ್ನದಿಂದ 1 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ.
1. ನಾಗರಾಳ ಗ್ರಾಮದ ಶ್ರೀ ಕಿಸಾನ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ರೈತ ಭವನ ನಿರ್ಮಾಣಕ್ಕೆ 20 ಲಕ್ಷ ರೂ.
2. ವಡಗೋಲ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ರೈತ ಭವನ ನಿರ್ಮಾಣಕ್ಕೆ 20 ಲಕ್ಷ ರೂ.
3. ಕಮತ್ಯಾನಟ್ಟಿ ಗ್ರಾಮದ ಶ್ರೀ ಸಿದ್ದೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ರೈತ ಭವನ ನಿರ್ಮಾಣಕ್ಕೆ 25 ಲಕ್ಷ ರೂ.
4. ಮಜಲಟ್ಟಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ರೈತ ಭವನ ನಿರ್ಮಾಣಕ್ಕೆ 35 ಲಕ್ಷ ರೂ.
ಹೀಗೆ ಒಟ್ಟು ಒಂದು ಕೋಟಿ ರೂಪಾಯಿ ಅನುದಾನ ಮಂಜೂರಾಗಿರುವ ಆದೇಶ ಪ್ರತಿಯನ್ನು ಶ್ರೀ ಪ್ರಕಾಶ ಅಣ್ಣಾ ಹುಕ್ಕೇರಿ ಅವರು ಸಂಘದ ಆಡಳಿತ ಮಂಡಳಿ ಸದಸ್ಯರಿಗೆ ಹಸ್ತಾಂತರಿಸಿದರು.
ವರದಿ: ರಾಜು ಮುಂಡೆ