ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು ಹುತಾತ್ಮರಾಗಿದ್ದು, ಇದರಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಸೇನಾ ವಾಹನವೊಂದು ಅಪಘಾತಕ್ಕೀಡಾಗಿ ಕರ್ನಾಟಕದ ಮೂವರು,ಮಹಾರಾಷ್ಟ್ರದ ಇನ್ನಿಬ್ಬರು ಯೋಧರು ಹುತಾತ್ಮರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಮತ್ತು ಗಾಯಗೊಂಡ ಸಿಬ್ಬಂದಿ ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ