ಬೆಳಗಾವಿ:ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞರು, ಉದಾರೀಕರಣ & ಜಾಗತೀಕರಣದ ಮೂಲಕ ರಾಷ್ಟ್ರದ ಅರ್ಥವ್ಯವಸ್ಥೆಗೆ ಹೊಸ ಭಾಷ್ಯ ಬರೆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ.
ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಮಂತ್ರಿಗಳಾಗಿದ್ದಾಗ, ನಾನು ಕರ್ನಾಟಕ ಮುಖ್ಯಮಂತ್ರಿಯಾಗಿ ಇಂತಹ ಮಹಾನ್ ಮುತ್ಸದ್ಧಿಯೊಂದಿಗೆ ಕೆಲಸ ಮಾಡಿದ್ದು ಅಪೂರ್ವ ಅನುಭವ.
ದೇಶದ ಅರ್ಥ ವ್ಯವಸ್ಥೆಗೆ ಹೊಸ ದಿಕ್ಕು ತೋರಿದ ಮಹಾನ್ ಚೇತನಕ್ಕೆ ಭಾವಪೂರ್ಣ ನಮನಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಗಲಿಕೆಗೆ ಬೆಳಗಾವಿ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಜಗದೀಶ ಶೆಟ್ಟರ ಅವರು.ಸಂತಾಪ ಸೂಚಿಸಿದ್ದಾರೆ.
ವರದಿ: ಪ್ರತೀಕ ಚಿಟಗಿ