ವರ್ಷದ ಕೊನೆಯ ದಿನ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು 

Bharath Vaibhav
ವರ್ಷದ ಕೊನೆಯ ದಿನ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು 
WhatsApp Group Join Now
Telegram Group Join Now

ಹೊನ್ನಾವರ : ಇಂದು ಬೆಳ್ಳಂಬೆಳಗ್ಗೆ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊನ್ನಾವರ ಪಟ್ಟಣದ ಶರಾವತಿ ಸೇತುವೆ ಮೇಲೆ ನಡೆದಿದೆ.

ಇಂದು ಬೆಳ್ಳಂಬೆಳಗ್ಗೆ ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸವಾರರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ (34), ಸಂಶಿಯ ಗೌರೀಶ ನಾಯ್ಕ ( 25), ಖರ್ವಾದ ರಮೇಶ ನಾಯ್ಕ (22) ಮೃತ ದುರ್ದೈವಿಗಳು

ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ. ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!