Ad imageAd image

ಪಟ್ಟಣದಲ್ಲಿ ಶಿವರಾತ್ರಿ ಅಂಗವಾಗಿ ಶಿವಲಿಂಗ ದರ್ಶನ

Bharath Vaibhav
ಪಟ್ಟಣದಲ್ಲಿ ಶಿವರಾತ್ರಿ ಅಂಗವಾಗಿ ಶಿವಲಿಂಗ ದರ್ಶನ
WhatsApp Group Join Now
Telegram Group Join Now

ಕಂಪ್ಲಿ : ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನಲ್ಲಿ :ಮಹಾಶಿವರಾತ್ರಿ ಅಂಗವಾಗಿ ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಫೆ.26ರಿಂದ ಮೂರು ದಿನಗಳ ಕಾಲ ಈಶ್ವರಗುಡಿ ಆವರಣದಲ್ಲಿ
ವೈವಿಧ್ಯಮಯ ಶಿವಲಿಂಗ ದರ್ಶನ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿ.ವಿ ಮೂರು ದಿನ ಶಿವರಾತ್ರಿ ಉತ್ಸವವನ್ನು ಭಕ್ತಿ, ಶ್ರದ್ಧೆಯಿಂದ ವಿವಿಧ ಹಂತದಲ್ಲಿ ಆಚರಿಸಲು ನಿರ್ಧರಿಸಿದ್ದು, ಶಿವಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಶಿವನ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಸಂಚಾಲಕಿ ಸಕಲೇಶ್ವರಿ ತಿಳಿಸಿದರು.

ಶಿವರಾತ್ರಿ ಹಬ್ಬಕ್ಕೆ ತನ್ನದೇಯಾದ ವಿಶೇಷತೆ, ವೈವಿಧ್ಯತೆ ಇದೆ. ದೇಶದ ಶಿವಭಕ್ತರು ಮಾತ್ರ ಶಿವನನ್ನು ಆರಾಧಿಸುತ್ತಿದ್ದರು. ಆದರೆ, ಈಗ ಶಿವರಾತ್ರಿ ಹಬ್ಬ ಅಂತರಾಷ್ಟ್ರೀಯ ಮಾನ್ಯತೆ ಪಡೆದಿದ್ದು, ಅಮೇರಿಕ, ದಕ್ಷಿಣ ಅಮೇರಿಕ, ಇರಾನ್, ಆಸ್ಟ್ರೀಯಾ, ಈಜಿಪ್ತ್‌, ಫ್ರಾನ್ಸ್, ಚೀನಾ, ಗ್ರೀಕ್, ಯುರೋಪ್‌ ನಂತರ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲೂ ಶಿವನ ಆರಾಧನೆ ನಡೆಯುತ್ತಿದೆ.

26ರಂದು ಸಂಜೆ 6 ಗಂಟೆಗೆ ಮಹಾಶಿವರಾತ್ರಿ ಉದ್ಘಾಟನಾ ಮಹೋತ್ಸವ ಮತ್ತು ಉಪವಾಸ ಜಾಗರಣೆ ಜರುಗಲಿದೆ. ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿವೆ ಎಂದು ಬಹ.ಕುಮಾರಿ ಸಕಲೇಶ್ವರಿ ಅವರು ಸೋಮವಾರ ಮಧ್ಯಾಹ್ನ 2:30 ಕ್ಕೆ ಮಾಧ್ಯಮದವರಿಗೆ ಮಾಹಿತಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!