Ad imageAd image

ಅವಹೇಳನಕಾರಿ ಹೇಳಿಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್

Bharath Vaibhav
ಅವಹೇಳನಕಾರಿ ಹೇಳಿಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್
WhatsApp Group Join Now
Telegram Group Join Now

ಮೈಸೂರು: ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಯೂತ್​​ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ನೀಡಿದ್ದ ದೂರು ಆಧರಿಸಿ ಮೈಸೂರು ಉದಯಗಿರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ದೂರಿನಲ್ಲೇನಿದೆ: ಮಾಜಿ ಸಂಸದ ಪ್ರತಾಪ್ ಸಿಂಹ ಫೆಬ್ರವರಿ 20 ರಂದು ಉದಯಗಿರಿ ವ್ಯಾಪ್ತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ಸಮುದಾಯದವರು ಈ ದೇಶದ ಪ್ರಜೆಗಳೇ ಅಲ್ಲ ಎಂಬ ರೀತಿಯಲ್ಲಿ ಹೇಳಿದ್ದಾರೆ. ಮುಸ್ಲಿಂ ಸಮುದಾಯದ ಜನ ಸಂಖ್ಯೆ ಜಾಸ್ತಿ ಮಾಡಿಕೊಂಡು ಹೆಚ್ಚು ಮಕ್ಕಳು ಹುಟ್ಟಿಸುತ್ತಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ಕೋಮು ಘರ್ಷಣೆ ಉಂಟುಮಾಡುವ ರೀತಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಮುಸ್ಲಿಂ ಸಮುದಾಯದ ಜನರನ್ನು ನಿಂದಿಸುವ ರೀತಿಯಲ್ಲಿ ಪ್ರಚೋದನಾ ಭಾಷಣವನ್ನು ಮಾಡಿದ್ದಾರೆ. ಆದ್ದರಿಂದ ಪ್ರತಾಪ್ ಸಿಂಹರವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಯೂತ್​​ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ದೂರು ನೀಡಿದ್ದಾರೆ.

ಮೈಸೂರಿನ ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣ ವಿಚಾರವಾಗಿ ಇತ್ತೀಚೆಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ರತಾಪ್ ಸಿಂಹ, ದೇಶ ಇಬ್ಭಾಗ ಆದಾಗಲೇ ಮುಸ್ಲಿಂರು ಈ ದೇಶವನ್ನು ಬಿಟ್ಟು ತೊಲಗಬೇಕಿತ್ತು. ಆದರೆ ಇಲ್ಲಿ ಉಳಿದಕೊಂಡು ಮಕ್ಕಳನ್ನು ಹುಟ್ಟಿಸುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ ಹೇಳಿ? ಎಂದಿದ್ದರು. ಸದ್ಯ ಪ್ರತಾಪ್ ಸಿಂಹರ ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!