ಬೆಳಗಾವಿ: ಮರಾಠಿ ಯುವಕರ ಗೂಂಡಾಗಿರಿ ಜಿಲ್ಲೆಯಲ್ಲಿ ಮುಂದುವರಿದಿದ್ದು, ಕನ್ನಡ ಮಾತನಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಉಪಾಧ್ಯಕ್ಷನ ಮೇಲೆ ಹಲ್ಲೆ ಮಾಡಲಾಗಿದೆ.
ಖಾನಾಪುರದ ಜಾಂಬೋಡಿ ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದೆ. ಖಾನಾಪುರ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಮೇಲೆ ಈ ದಾಳಿ ನಡೆದಿದೆ.
ಹಲ್ಲೆ ನಡೆಸಿದ ಬಳಿಕ ಮರಾಠಿ ಪುಂಡರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಇತ್ತ ಹಲ್ಲೆಗೆ ಒಳಗಾದ ಜಯವಂತ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಎರಡು ದಿನಗಳ ಹಿಂದಷ್ಟೇ ಕನ್ನಡ ಮಾತನಾಡು ಎಂದಿದ್ದಕ್ಕೆ ಬಸ್ ನಿಲ್ಲಿಸಿ ಯುವಕರು ಕೆ ಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಹಲ್ಲೆ ಮಾಡಿದ್ದರು. ಈ ಸಂಬಂಧ ಕೆಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.




