Ad imageAd image

3 ದಿನಗಳಿಂದ ಸ್ಥಗಿತಗೊಂಡ ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ : ಪ್ರಯಾಣಿಕರ ಪರದಾಟ 

Bharath Vaibhav
3 ದಿನಗಳಿಂದ ಸ್ಥಗಿತಗೊಂಡ ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ : ಪ್ರಯಾಣಿಕರ ಪರದಾಟ 
WhatsApp Group Join Now
Telegram Group Join Now

ಬೆಳಗಾವಿ : ಕನ್ನಡ ಮಾತನಾಡಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಪುಂಡರು ಹಲ್ಲೆ ನಡೆಸಿದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆಯುತ್ತಿದೆ. ಇದೀಗ ಕರ್ನಾಟಕ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ 3 ದಿನಗಳಿಂದ ಸ್ಥಗಿತಗೊಳಿಸಲಾಗಿದೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರದ ಬಸ್ ತಡೆದು, ಪ್ರತಿಭಟನೆ ನಡೆಸಲಾಗಿದೆ.ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ ತಡೆದು ಪ್ರತಿಭಟನೆ ನಡೆಸಲಾಗಿದೆ. ಕೊಲ್ಹಾಪುರದಲ್ಲಿ ಶಿವಸೇನೆ ಭಾರೀ ಪ್ರತಿಭಟನೆ ಮಾಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ – ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಸರ್ಕಾರಿ ಬಸ್ ಸಂಚಾರ ಮೂರು ದಿನಗಳಿಂದ ಬಂದ್ ಆಗಿದ್ದು, ಇಂದು ಕೂಡ ಬಸ್ ಸಂಚಾರ ಸ್ಥಗಿತಗೊಂಡಿದೆ.

ಕೊಲ್ಲಾಪುರದಲ್ಲಿ ಶಿವಸೇನೆ ನಡೆಸುತ್ತಿರುವ ಪ್ರತಿಭಟನೆ ಇದಕ್ಕೆ ಕಾರಣ. ಸದ್ಯ ಕರ್ನಾಟಕ-ಮಹಾರಾಷ್ಟ್ರ ನಡುವಿನ 250 ಕ್ಕೂ ಹೆಚ್ಚು ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ನಾಳೆಯಿಂದ ಬಸ್ ಸಂಚಾರ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!