ಬೆಂಗಳೂರು : ಶಿವರಾತ್ರಿ ಹಬ್ಬಕ್ಕೆ ತನ್ನದೇಯಾದ ವಿಶೇಷತೆ, ವೈವಿಧ್ಯತೆ ಇದೆ ದೇಶದ ಶಿವಭಕ್ತರು ಮಾತ್ರ ಶಿವನನ್ನು ಆರಾಧಿಸುತ್ತಿದ್ದರು. ಆದರೆ, ಈಗ ಶಿವರಾತ್ರಿ ಹಬ್ಬ ಅಂತರಾಷ್ಟ್ರೀಯ ಅಂದರೆ ಅಮೇರಿಕ, ದಕ್ಷಿಣ ಅಮೇರಿಕ, ಇರಾನ್, ಆಸ್ಟ್ರೀಯಾ, ಈಜಿಪ್ತ್, ಫ್ರಾನ್ಸ್, ಚೀನಾ, ಗ್ರೀಕ್, ಯುರೋಪ್ ನಂತರ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲೂ ಶಿವನ ಆರಾಧನೆ ನಡೆಯುತ್ತಿದೆ ಎಂದು ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ಮಾಜಿ ಪಾಲಿಕೆ ಸದಸ್ಯ ಕೆ ನಾಗಭೂಷಣ್ ಹೇಳಿದರು.

ಅವರು ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡಿನ ಅಬ್ಬಿ ಗೆರೆಯ ಪ್ರಜಾಪಿತ ಬ್ರಹ್ಮ ಕುಮಾರಿ ವಿಶ್ವ ವಿದ್ಯಾಲಯದ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಈಶ್ವರನ ವಿಗ್ರಹ ಸ್ಥಾಪಿಸಿ ಪೂಜಾ ಪುನಸ್ಕಾರ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಶಿವನ ಪೂಜೆ ಸಲ್ಲಿಸಿ ದರ್ಶನ ಪಡೆದು ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಸಿ ವೆಂಕಟೇಶ್, ಪ್ರಜಾಪಿತ ಬ್ರಹ್ಮ ಕುಮಾರಿ ವಿಶ್ವ ವಿದ್ಯಾಲಯದ ಪ್ರಮುಖರು ಯೋಗಿನಿಯರು, ಮಾತೆಯರು ಕಾರ್ಯಕರ್ತೆಯರು ಮುಂತಾದವರು ಉಪಸ್ಥಿತರಿದ್ದು ಶಿವನ ದರ್ಶನ ಪಡೆದರು.
ವರದಿ : ಅಯ್ಯಣ್ಣ ಮಾಸ್ಟರ್




