ಬೆಂಗಳೂರು: ರಾಜ್ಯ ಸರ್ಕಾರದಿಂದ ಜನರ ಆರೋಗ್ಯ ರಕ್ಷಣೆಗಾಗಿ ಮಹತ್ವದ ತುರ್ತ ಕ್ರಮ ಕೈಗೊಂಡಿದೆ. ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆ ನಿಷೇಧ ಮಾಡಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲಾ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ.
ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಲಾಗುವುದು ಅಂತ ತಿಳಿಸಿದ್ದಾರೆ.
ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.




