Ad imageAd image

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ

Bharath Vaibhav
ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ
vidhana soudha
WhatsApp Group Join Now
Telegram Group Join Now

ಬೆಂಗಳೂರು : ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡಲಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್ ಭಾಷಣ ಮಾಡಲಿದ್ದಾರೆ.

ಮಾರ್ಚ್ 4 ರಿಂದ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.ನಂತರ ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಾರ್ಚ್ 21 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ.

ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಭಾಷಣ ಮಾಡಲಿದ್ದಾರೆ. ವಿವಿಧ ವಿಧೇಯಕಗಳ ಬಗ್ಗೆ ಸರ್ಕಾರದ ಧೋರಣೆ ಖಂಡಿಸಿ ಪತ್ರ ಬರೆದಿರುವ ರಾಜ್ಯಪಾಲರು ಅಧಿವೇಶನದಲ್ಲಿ ಸರ್ಕಾರದ ಬಗ್ಗೆ ಯಾವ ರೀತಿ ಮಾತನಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಮಾ.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್‌ ಮಂಡನೆ ಮಾಡಲಿದ್ದು, ಗ್ಯಾರಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್‌ ಮಂಡಿಸಲಿದ್ದಾರೆ. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ.

ಅಧಿವೇಶನದಲ್ಲಿ ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೊರತೆ, ಕೆಪಿಎಸ್ಸಿ ಹಗರಣ, ಬಸ್‌, ಮೆಟ್ರೋ ದರ ಏರಿಕೆ, ವಿವಿ ಮುಚ್ಚುವ ನಿರ್ಧಾರ, ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಆಗಿರುವ ಅನ್ಯಾಯ, ವಿವಿಧ ಯೋಜನೆಗಳಿಗೆ ಕೇಂದ್ರ ಅಂಗೀಕಾರ ನೀಡದಿರುವುದು ಸೇರಿ ಹತ್ತು ಹಲವು ವಿಷಯಗಳು ಉಭಯ ಸದನಗಳಲ್ಲಿ ತೀವ್ರ ಚರ್ಚೆ, ವಾಗ್ವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!