ಇಳಕಲ್ :ನಗರದ ಪೊಲೀಸ್ ಠಾಣೆಯ ಆವರಣದಲ್ಲಿ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಸಮಾರಂಭದಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ತಮ್ಮ ಅಮೃತ ಹಸ್ತದಿಂದ ಭೂಮಿ ಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಇಳಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ರಜಾಕ್ ತಟಗಾರ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಧಾರಾಣಿ ಸಂಗಮ್,ಇಳಕಲ್ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಚಿಂಚಮಿ,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರಣಪ್ಪ ಆಮದಿಹಾಳ ಸೇರಿದಂತೆ ಇಳಕಲ್ ನಗರಸಭೆ ಸದಸ್ಯರು ಮತ್ತು ಮುಖಂಡರು ಉಪಸ್ಥಿತರಿದ್ದರು.
ವರದಿ: ದಾವಲ್ ಶೇಡಂ




