ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬಹುಭಾಷಾ ನಟಿ ರನ್ಯಾ ರಾವ್ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
ವಿದೇಶದಿಂದ ಬಂದ ನಟಿಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರ್‌ಪೋರ್ಟ್ ಕಸ್ಟಮ್ಸ್ ಡಿಆರ್ಐ ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಟಿ ನಟಿ ರನ್ಯಾ ರಾವ್ ಕಳೆದ ರಾತ್ರಿ ಅಂದರೆ ಮಾರ್ಚ್ 03 ಸೋಮವಾರ ರಾತ್ರಿ ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನಟಿ ವಿದೇಶದಿಂದ ಹೆಚ್ಚುವರಿ ಚಿನ್ನ ಸಾಗಾಟ ಮಾಡಲು ಯತ್ನಿಸಿದ ಆರೋಪದ ಬಗ್ಗೆ ಖಚಿತ ಮಾಹಿತಿ ಮೆರೆಗೆ ಡಿಆರ್ಐ ತಂಡದ ಅಧಿಕಾರಿಗಳು ಕೂಡ ವಿಮಾನ ನಿಲ್ದಾಣಕ್ಕೆ ಬಂದಿದ್ದು, ನಟಿ ವಿಮಾನದಿಂದ ಇಳಿಯುತ್ತಿದ್ದಂತೆ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಚಿನ್ನದ ಬೆಲೆ 50,000 ರೂಪಾಯಿಗೆ ಮಹಾ ಕುಸಿತ… ಕಳೆದ ರಾತ್ರಿ ನಟಿ ನಟಿ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಹೋಗಿರುವ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ. ಇನ್ನು ನಟಿ ನಟಿ ರನ್ಯಾ ರಾವ್ ಕನ್ನಡದಲ್ಲಿ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಹಾಗೂ ಗೋಲ್ಡ್‌ನ್ ಸ್ಟಾರ್ ಗಣೇಶ್ ಅಭಿನಯದ ಪಟಾಕಿ ಚಿತ್ರದಲ್ಲಿ ನಟಿಸಿದ್ದಾರೆ.




