Ad imageAd image

ಎಸ್​​ಸಿ, ಎಸ್​ಟಿ ಶಾಸಕರೊಂದಿಗೆ ಸತೀಶ್ ಜಾರಕಿಹೊಳಿ ಸಭೆ 

Bharath Vaibhav
ಎಸ್​​ಸಿ, ಎಸ್​ಟಿ ಶಾಸಕರೊಂದಿಗೆ ಸತೀಶ್ ಜಾರಕಿಹೊಳಿ ಸಭೆ 
satish jarkiholi
WhatsApp Group Join Now
Telegram Group Join Now

ಬೆಂಗಳೂರು : ಕಾಂಗ್ರೆಸ್ ನಲ್ಲಿ ಸದ್ಯ ಎಲ್ಲವೂ ಸರಿಯಿಲ್ಲ. ನಾಯಕರ ನಡುವಿನ ಬಣ ಬಡಿದಾಟ ಪಕ್ಷದೊಳಗೆ ದೊಡ್ಡ ಕಂದಕವನ್ನೇ ಸೃಷ್ಟಿಮಾಡಿದೆ . ಈ ನಡುವೆ ಸಾಹುಕಾರ್ ಸತೀಶ್ ಜಾರಕಿಹೊಳಿ ಮನೆ ದೊಡ್ಡ ಬೆಳವಣಿಗೆಗೆ ಸಾಕ್ಷಿಯಾಗಿದೆ.

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.ಈ ವೇಳೆ ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಭೆಯಲ್ಲಿ ಎಸ್​​ಸಿ, ಎಸ್​ಟಿ ಸಮುದಾಯಗಳ ಶಾಸಕರು ಬೇಡಿಕೆ ಪಟ್ಟಿಯನ್ನ ಸಿದ್ಧಪಡಿಸಿದ್ದಾರೆ. ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಮುದಾಯದ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚೆ ನಡೆಸಲಾಗಿದೆ.

ಇನ್ನು, ಸತೀಶ್ ಜಾರಕಿಹೊಳಿ ನಿವಾಸದ ಸಭೆಯಲ್ಲಿ ಸಚಿವ ಕೆಎನ್ ರಾಜಣ್ಣ ಭಾಗಿಯಾಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗಿನ ಸಭೆಗೆ ಗೈರಾಗಿದ್ದ ಅವರು ಸಮುದಾಯದ ಸಭೆಯಲ್ಲಿ ಭಾಗಿಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!