ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಯಾವುದೇ ಕ್ರಮ ಕೈಗೊಳ್ಳದೆ
ಕೇವಲ ಬೆಂಗಳೂರು ಮೈಸೂರು ಭಾಗಕ್ಕೆ ಸೀಮಿತವಾದ ಬಜೆಟ್ ಇದಾಗಿದೆ ಎಂದು ಹಿಂದುಸ್ತಾನ್ ಜನತಾ ಪಾರ್ಟಿ ಯ ರಾಜ್ಯದ್ಯಕ್ಷ ವಿನಾಯಕ ಮಾಳದಕರ ಆರೋಪಿಸಿದರು.
. ಈ ಬಜೆಟ್ ಕರ್ನಾಟಕವನ್ನು ಇನ್ನಷ್ಟು ಸಾಲದ ಕೂಪಕ್ಕೆ ನೂಕಿದೆ. ಕರ್ನಾಟಕ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಕೊಡುಗೆ ಈ ಬಜೆಟ್ ಕೊಟ್ಟಿದೆ. ಹೀಗಾಗಿ ಇದೊಂದು ಜನ ವಿರೋಧಿ ಮತ್ತು ಅಭಿವೃದ್ಧಿ ವಿರೋಧಿ ಬಜೆಟ್ ಇದಾಗಿದೆ ಎಂದು ಆರೋಪಿಸಿದರು.
ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಯಾವುದೇ ಯೋಜನೆ ಇಲ್ಲ. ಕಿತ್ತೂರು ಕರ್ನಾಕಟ ಭಾಗಕ್ಕೆ ಶೂನ್ಯ ಕೊಡುಗೆ ನೀಡಿದ್ದು, ಇದು ಬೆಂಗಳೂರು ಮೈಸೂರು ಭಾಗಕ್ಕೆ ಸೀಮಿತವಾದ ಬಜೆಟ್ ಆಗಿದೆ ಎಂದು ಆರೋಪಿಸಿದರು.
ಸುಧಿರ ಕುಲಕರ್ಣಿ




