ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ, ಸ್ವಾಸ್ಥ್ಯ ಬಂಡಿ ವಾಹನ ಹಾಗೂ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಲಾಯಿತು.

ಮಹಿಳಾ ಸ್ವ ಸಹಾಯ ಸಂಘಗಳು, ಸ್ತ್ರೀ ಶಕ್ತಿ ಸಂಘಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ವಿವಿಧ ಸಂಸ್ಥೆಗಳ ವತಿಯಿಂದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ತೆರೆಯಲಾಗಿದೆ.
ಈ ವೇಳೆ ಶಾಸಕ ಉದಯ್ ಗರುಡಾಚಾರ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ, ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ, ರಾಜ್ಯ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ರೆಡ್ಡಿ, ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪುಷ್ಪಲತಾ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




