Ad imageAd image

ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ ವಿರುದ್ಧ ಜನಾಂದೋಲನ : ಛಲವಾದಿ ನಾರಾಯಣಸ್ವಾಮಿ 

Bharath Vaibhav
ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ ವಿರುದ್ಧ ಜನಾಂದೋಲನ : ಛಲವಾದಿ ನಾರಾಯಣಸ್ವಾಮಿ 
WhatsApp Group Join Now
Telegram Group Join Now

ಬೆಂಗಳೂರು: ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ ವಿರುದ್ಧ ಜನಾಂದೋಲನ ರೂಪಿಸಲಾಗುವುದು ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಇಂದು ಎಲ್ಲಾ ದಲಿತ ಸಂಘಟನೆಗಳ ಸಭೆಯ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.ದಲಿತ ಸಂಘಟನೆಗಳು ಇದಕ್ಕಾಗಿ 10 ತಂಡಗಳನ್ನು ರಚಿಸಲಿವೆ. ಇನ್ನೊಂದು ವಾರದ ಒಳಗೆ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಪ್ರಕಟಿಸಿದರು.

ರಾಜ್ಯದೆಲ್ಲೆಡೆ ಪ್ರವಾಸದ ಬಳಿಕ ಬೆಂಗಳೂರಿನಲ್ಲಿ ಸಮುದಾಯದ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಈ ಸರಕಾರಕ್ಕೆ ತಕ್ಕ ಪಾಠ ಕಲಿಸಲು ತೀರ್ಮಾನ ಮಾಡಿದ್ದಾರೆ. ಕಾಯ್ದೆ ಉಲ್ಲಂಘನೆ ಸಂಬಂಧ ನಾವು ಇದನ್ನು ಕೋರ್ಟಿಗೆ ಒಯ್ಯಲಿದ್ದೇವೆ; ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕೆಲಸ ನಮ್ಮಿಂದ ಆಗಲಿದೆ ಎಂದು ತಿಳಿಸಿದರು.

ದಲಿತರಿಗೆ ಆಗಿರುವ ಅನ್ಯಾಯವನ್ನು ಬಿಜೆಪಿ, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಸರಿಪಡಿಸಲು ಮತ್ತು ನ್ಯಾಯ ದೊರಕಿಸಿಕೊಡಲು ರಾಜ್ಯಾದ್ಯಂತ ಹೋರಾಟ ಮಾಡಿದ್ದೇವೆ. ಈಗ ದಲಿತ ಮುಖಂಡರು, ಸಂಘಟನೆಗಳು ಸೇರಿದ್ದರಿಂದ ಹೆಚ್ಚಿನ ಶಕ್ತಿ ಬಂದಿದೆ ಎಂದು ವಿವರಿಸಿದರು.

ಸಿದ್ದರಾಮಯ್ಯನವರು ದಲಿತ ವಿರೋಧಿ ಎಂಬುದನ್ನು ಸ್ಪಷ್ಟವಾಗಿ ತೋರಿಸಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ಸಿದ್ದರಾಮಯ್ಯನವರು ದಲಿತರನ್ನು ಎತ್ತಿ ಕಟ್ಟಿ ದಲಿತರನ್ನು ದಮನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಸರಕಾರ, ಮುಖ್ಯಮಂತ್ರಿಗಳು ಕೇವಲ ಗ್ಯಾರಂಟಿಗಳಲ್ಲೇ ಈ 5 ವರ್ಷವನ್ನು ದೂಡಲಿದ್ದಾರಾ? ಅಭಿವೃದ್ಧಿ ಮಾಡಲು ನಿಮಗೆ ಯೋಗ್ಯತೆ ಇಲ್ಲವೇ? ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಮಾಜಿ ಸಚಿವ ಮತ್ತು ಸಂಸದ ಗೋವಿಂದ ಕಾರಜೋಳ, ಕೇಂದ್ರದ ಮಾಜಿ ಸಚಿವ ಎ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷ ಕೊಳ್ಳೇಗಾಲ ಮಹೇಶ್, ದಲಿತ ಸಂಘಟನೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!