ದುಬೈ: ನಾಯಕ ರೋಹಿತ್ ಶರ್ಮಾ ಬಿರುಸಿನ ಅರ್ಧ ಶತಕದ ನೆರವಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭರ್ಜರಿ ಆರಂಭ ಕಂಡಿದೆ. ಭಾರತ ಮೊದಲ 12 ಓವರುಗಳಲ್ಲಿ ವಿಕೆಟ್ ನಷ್ಟವಿಲ್ಲದೇ 71 ರನ್ ಗಳಿಸಿದ್ದು, ಟ್ರೋಫಿ ಗೆಲ್ಲಲು 181 ರನ್ ಗಳ ಅಗತ್ಯವಿದೆ.
45 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್ ನೆರವಿನಿಂದ 56 ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದರೆ, ಶುಭಮಾನ್ ಗಿಲ್ 14 ರನ್ ಗಳಿಸಿ ಕ್ರೀಸ್ ಬಳಿ ಇದ್ದರು.




