Ad imageAd image

ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ : ಚಕ್ರವರ್ತಿ ಸೂಲಿಬೆಲೆ 

Bharath Vaibhav
ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ : ಚಕ್ರವರ್ತಿ ಸೂಲಿಬೆಲೆ 
WhatsApp Group Join Now
Telegram Group Join Now

ಬೆಂಗಳೂರು : ಎಷ್ಟು ದಿನ ನಮ್ಮ ಧರ್ಮದ ಯುವತಿಯರನ್ನೇ ನೋಡುತ್ತೀರಾ..?ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಮಂಗಳೂರಿನಲ್ಲಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ.

ದಕ್ಷಿಣ ಕನ್ನಡದ ಉಳ್ಳಾಲ ತಾಲೂಕಿನ ಕುತ್ತಾರಿ ನಲ್ಲಿ ನೀಡಿದ ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಪರ ವಿರೋಧ ಚರ್ಚೆಗಳಿಗೆ ಕಾರಣವಾಗಿದೆ.ಎಲ್ಲಿವರೆಗೆ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಿರೋಣ.

ಸ್ವಲ್ಪ ಬದಲಾವಣೆಯನ್ನು ತರೋಣ. ಹುಡುಗಿ ಸಿಗುತ್ತಿಲ್ಲ ಅಂತ ಎಷ್ಟು ದಿನ ಹೇಳ್ತೀರಾ..?ಎಷ್ಟು ದಿನ ನಮ್ಮ ಸಮುದಾಯದ ಹೆಣ್ಣು ಮಕ್ಕಳನ್ನು ನೋಡುತ್ತಿರಾ..? ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ.

ಮತಾಂತರ, ಲವ್ ಜಿಹಾದ್ ವಿಚಾರಗಳನ್ನು ಬಿಟ್ಟು ಬಿಡಿ. ಹಿಂದೂಧರ್ಮದಿಂದ ಮತಾಂತರವಾದವರನ್ನ ಮತ್ತೆ ‘ಘರ್ ವಾಪಸಿ’ ಮಾಡುವುದು ಹೇಗೆಂದು ನಮ್ಮ ಯುವಕರನ್ನ ತರಬೇತುಗೊಳಿಸಿ. ಈಗ ಟೆಸ್ಟ್ ಮ್ಯಾಚ್ಗಳು ನಿಂತು ಹೋಗಿವೆ. ಇರುವ ಇಪ್ಪತ್ತು ಓವರ್ಗಳಲ್ಲೇ ಬಡಿಯಬೇಕು ಎಂದರು.

ವಕ್ಸ್ ವಿರುದ್ಧ ದೇಶದೆಲ್ಲೆಡೆ ಹೋರಾಟ ನಡೆಯುತ್ತಿರುವಾಗ ರಾಜ್ಯ ಸರ್ಕಾರ, ವಕ್ಸ್ ಆಸ್ತಿಯ ನವೀಕರಣಕ್ಕೆ ₹150 ಕೊಟಿ ನೀಡಲು ಹೊರಟಿದೆ. ಪ್ರಚೋದನೆ ನೀಡಿ ಪ್ರತ್ಯೇಕತೆಯನ್ನು ಹುಟ್ಟುಹಾಕುವ ಪ್ರಯತ್ನಕ್ಕೆ ಮುಂದಾಗಿದೆ’ ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!