Ad imageAd image

21 ವರ್ಷಗಳ ಹಿಂದೆ ನಟಿ ಸೌಂದರ್ಯ ಸಾವು ಪ್ರಕರಣಕ್ಕೆ ಹೊಸ ಟ್ವೀಸ್ಟ್

Bharath Vaibhav
21 ವರ್ಷಗಳ ಹಿಂದೆ ನಟಿ ಸೌಂದರ್ಯ ಸಾವು ಪ್ರಕರಣಕ್ಕೆ ಹೊಸ ಟ್ವೀಸ್ಟ್
WhatsApp Group Join Now
Telegram Group Join Now

ಕನ್ನಡ ನಟಿ ಸೌಂದರ್ಯ 2004 ಜುಲೈ 7ರಂದು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದರು. ಆದರೆ ಇದು ಅಪಘಾತವಲ್ಲ ಕೊಲೆ ಎಂದು ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಟಿ ಸೌಂದರ್ಯ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಸ್ಟಾರ್ ನಟನ ವಿರುದ್ಧ ದೂರು ದಾಖಲಿಸಲಾಗಿದೆ.

ಬಹುಭಾಷೆಯಲ್ಲಿ ಸಿನಿಮಾ ಮಾಡಿದ ಸೌಂದರ್ಯ ಕರ್ನಾಟಕದಲ್ಲೂ ಪ್ರಸಿದ್ಧ ನಟಿ. ಆದರೆ ಅವರು ಕೇವಲ 31ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದರು. 2004 ಏಪ್ರಿಲ್ 17ರಂದು ಸೌಂದರ್ಯ ಅವರು ಭಾರತೀಯ ಜನತಾ ಪಕ್ಷ ಮತ್ತು ತೆಲುಗು ದೇಶಂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಕರೀಂನಗರಕ್ಕೆ ಹೋಗುತ್ತಿದ್ದಾಗ ಅವರ ಖಾಸಗಿ ವಿಮಾನ ಅಪಘಾತಕ್ಕೀಡಾಗಿ ಅವರು ನಿಧನರಾದರು.

ವಿಮಾನ ಅಪಘಾತದಲ್ಲಿ ಅವರ ದೇಹ ಸುಟ್ಟು ಕರಕಲಾಗಿ ಹೋಗಿತ್ತು. ಕೊನೆಯದಾಗಿ ಕುಟುಂಬಕ್ಕೆ ಅವರ ಮುಖ ನೋಡಲು ಕೂಡ ಆಗಲಿಲ್ಲ. ಈ ದುರಂತ ಘಟನೆ ನಡೆದು 21 ವರ್ಷಗಳು ಕಳೆದಿವೆ. ಈ ಪ್ರಕರಣದಲ್ಲಿ ಈಗ ಒಬ್ಬ ಸ್ಟಾರ್ ನಟನ ಹೆಸರು ಬೆಳಕಿಗೆ ಬರುತ್ತಿದೆ. ಟಾಲಿವುಡ್ ನ ಖ್ಯಾತ ಹಿರಿಯ ನಟ ಮೋಹನ್ ಬಾಬು ವಿರುದ್ಧ ದೂರು ದಾಖಲಿಸಲಾಗಿದೆ. ನಟಿ ಸೌಂದರ್ಯ ಅವರ ಸಾವಿಗೆ ನಟ ಮೋಹನ್ ಬಾಬು ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ. ಚಿಟ್ಟಿಮಲ್ಲು ಎಂಬಾತ ಖಮ್ಮಂ ಎಸಿಪಿ ಮತ್ತು ಖಮ್ಮಂ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ಕನ್ನಡ ನಟಿ ಸೌಂದರ್ಯ ಅವರು ಶಂಷಾಬಾದ್ ಪ್ರದೇಶದ ಜಲ್ಪಲ್ಲಿ ಗ್ರಾಮದಲ್ಲಿ 6 ಎಕರೆ ಭೂಮಿಯನ್ನು ಖರೀದಿಸಿದ್ದರು. ಮೋಹನ್ ಬಾಬು ಅವರಿಗೆ ಆ ಭೂಮಿ ಮೇಲೆ ಕಣ್ಣು ಬಿದ್ದಿತ್ತು. ಹೀಗಾಗಿ ಆ ಭೂಮಿಯನ್ನು ಮಾರಾಟ ಮಾಡಲು ಮೋಹನ್ ಬಾಬು ಸಂದರ್ಯ ಹಾಗೂ ಅವರ ಸಹೋದರನನ್ನು ಕೇಳಿದ್ದರು. ಆದರೆ ನಟಿ ಸೌಂದರ್ಯ ಮತ್ತು ಅವರ ಸಹೋದರ ಅಮರನಾಥ್ ಆ ಭೂಮಿಯನ್ನು ಮಾರಾಟ ಮಾಡಲು ಒಪ್ಪಲಿಲ್ಲ. ಈ ವಿಷಯವಾಗಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಇದೇ ಕಾರಣಕ್ಕೆ ಮೋಹನ್ ಬಾಬು ದ್ವೇಷ ಹೊಂದಿದ್ದರು ಎಂದು ದೂರುದಾರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!