ಕೊಪ್ಪಳ : ಜಿಲ್ಲೆಯ ಹುಲಗಿ ಗ್ರಾಮದಲ್ಲಿರುವ ಸುಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 40 ದಿನಗಳಲ್ಲಿ ಬರೋಬ್ಬರಿ 99.21 ಲಕ್ಷ ರೂ. ಹಣ ಸಂಗ್ರಹವಾಗಿದೆ.
ನಗದು ಹಣದ ಜೊತೆಗೆ 216 ಗ್ರಾಂ ಬಂಗಾರ, 11.5 ಕೆಜಿ ಬೆಳ್ಳಿ ಆಭರಣ ಸಂಗ್ರಹವಾಗಿದೆ. ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಬಂದು ದೇವಿಯ ದರ್ಶನ ಪಡೆಯುತ್ತಾರೆ.




