ಬಾಲಿವುಡ್ ಖ್ಯಾತ ಹಿರಿಯ ನಟ ದೇಬ್ ಮುಖರ್ಜಿ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
1965ರಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ದೇಬ್ ಮುಖರ್ಜಿ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.’ಏಕ್ ಬಾರ್ ಮುಸ್ಕುರಾದೊ’, ‘ಆಸೂ ಬನ್ ಗಯೇ’, ‘ಫೂಲ್’, ‘ಅಭಿನೇತ್ರಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು.
ಇನ್ನು ದೇಬ್ ಮುಖರ್ಜಿ ಯುವ ನಿರ್ದೇಶಕ ಅಯಾನ್ ಮುಖರ್ಜಿ ತಂದೆ. ದೇಬ್ ಮುಖರ್ಜಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮುಂಬೈನ ಅವರ ನಿವಾಸದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.