ಚಿಕ್ಕೋಡಿ: ಪಟ್ಟಣದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಪ್ರಯತ್ನದಿಂದ ಮಂಜೂರಾದ 1 ಕೋಟಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಪದವಿ ಪೂರ್ವ ಶಿಕ್ಷಣ ಉಪನಿರ್ದೇಶಕರ (DDPU) ಕಚೇರಿ ಕಟ್ಟಡ ಕಾಮಗಾರಿಗೆ ಚಾಲನೆ.
ಶೈಕ್ಷಣಿಕ ಆಡಳಿತ ಸುಗಮಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿರುವ ಈ ಕಟ್ಟಡವು ರಾಜ್ಯದಲ್ಲೇ 2 ನೇಯ DDPU ಕಚೇರಿ ಇದಾಗಲಿದ್ದು, ಈ ಕಟ್ಟಡವು ಶಿಕ್ಷಣ ಇಲಾಖೆಯ ಕಾರ್ಯನಿರ್ವಹಣೆಯನ್ನು ಮತ್ತಷ್ಟು ಸಮರ್ಥಗೊಳಿಸುವುದರ ಜೊತೆಗೆ, ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೇವೆ ಒದಗಿಸಲು ಸಹಾಯ ಮಾಡಲಿದೆ.
ಈ ಸಂದರ್ಭದಲ್ಲಿ ಚಿಕ್ಕೋಡಿ ಪುರಸಭೆ ಸದಸ್ಯರು, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ