ಬೆಂಗಳೂರು : ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕರಿಮಣಿ ಮಾಲೀಕ ಯಾರು ಎನ್ನುವುದು ಕೀಳು ಅಭಿರುಚಿಯ ಪ್ರಯೋಗ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ, ನಿಮ್ಮ ಪಕ್ಷದಲ್ಲಿ ಭಿನಾಭಿಪ್ರಾಯಗಳಿಲ್ಲವೇ? ನಿಮ್ಮ ಭಿನ್ನಾಭಿಪ್ರಾಯಗಳು ಯಾವ ಮಟ್ಟಕ್ಕೆ ಹೋಗಿವೆ ಎಂಬ ಚರ್ಚೆ ಬೇಡ. ಅಭಿರುಚಿ ಹೀನ ಎಂದಷ್ಟೇ ಹೇಳಿದ್ದೇನೆ. ನಿಮಗೆ ಸರಿಯಿದ್ದರೆ ಓಕೆ. ಜನ ಅಂತಿಮವಾಗಿ ತೀರ್ಮಾನ ಮಾಡುತ್ತಾರೆ ಎಂದರು.
ಅಶೋಕ್ ಹಾಗೂ ಸುನೀಲ್ ಕುಮಾರ್ ಅವರು ಮಾತನಾಡುವಾಗ ಕರಿಮಣಿ ಮಾಲೀಕ ಯಾರು? ಎಂದು ಪ್ರಶ್ನಿಸಿದ್ದಾರೆ. ನನ್ನ ಹಾಗೂ ಬಹುತೇಕ ಸದಸ್ಯರ ಪ್ರಕಾರ ಇವು ಅರ್ಥಹೀನ ಮಾತುಗಳು. ನನಗೂ ಹಿರಿಯ ಸದಸ್ಯರಿಂದ ಇಂಥ ಮಾತುಗಳ ನಿರೀಕ್ಷೆ ಇರಲಿಲ್ಲ ಎಂದು ಹೇಳಿದರು.