ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ನಿನ್ನೆಯಷ್ಟೇ ಬಿಜೆಪಿ ಹೈಕಮಾಂಡ್ ಬಿಜೆಪಿಯ ಶಿವರಾಂ ಹೆಬ್ಬಾರ್, ಎಸ್ಟಿ ಸೋಮಶೇಖರ್ ಸೇರಿದಂತೆ ಹಲವರಿಗೆ ನೋಟಿಸ್ ನೀಡಿತ್ತು. ಇದರ ಬೆನ್ನಲ್ಲೇ ಬಸನಗೌಡ ಪಾಟೀಲ್ ಯತ್ನಾಳ್ರವರನ್ನು ಉಚ್ಚಾಟಿಸಿ ಬಿಜೆಪಿ ಹೈಕಮಾಂಡ್ ಆದೇಶಿಸಿದೆ.
ಪದೇ ಪದೇ ಪಕ್ಷದ ವಿರುದ್ಧ ಯತ್ನಾಳ್ರವರು ನೀಡುತ್ತಿದ್ದ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು ಯತ್ನಾಳ್ರವರನ್ನು ಉಚ್ಛಾಟಿಸುವ ನಿರ್ಧಾರ ಪ್ರಕಟಿಸಿದ್ದಾರೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗಿದ್ದು ಆರು ವರ್ಷಗಳ ಕಾಲ ತಮ್ಮನ್ನು ಭಾರತೀಯ ಜನತಾ ಪಾರ್ಟಿಯಿಂದ ಉಚ್ಚಾಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.