ಬೆಳಗಾವಿ: ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಬಸವರಾಜ ಪುಡಕಲಕಟ್ಟಿ (22) ಎಂದು ಗುರುತಿಸಲಾಗಿದ್ದು, ಈತ ಗೋಕಾಕ್ ಮೂಲದ ನಿವಾಸಿ.
ಅವಘಡದಲ್ಲಿ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವೇಳೆ ಶಾಸಕರ ಸಹೋದರನ ಪುತ್ರ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.