ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೇ. 6 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ಮೇ. 6 ರವರೆಗೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, , ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಯಾದಗಿರಿ, ಬಳ್ಳಾರಿ, , ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.




