ಚೆನ್ನೈ: ಪಂಜಾಬ್ ಕಿಂಗ್ಸ್ ತಂಡವು ಇಂದು ಸಾಯಂಕಾಲ 7:30 ಕ್ಕೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 49 ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಪಂಜಾಬ್ ಕಿಂಗ್ಸ್ ತಂಡವು 9 ಪಂದ್ಯಗಳನ್ನು ಆಡಿದ್ದು, 5 ರಲ್ಲಿ ಗೆದ್ದು, 3 ರಲ್ಲಿ ಸೋತು, ಒಂದು ಪಂದ್ಯ ಅನಿರ್ನಿತ ದಿಂದ ಒಟ್ಟು 11 ಅಂಕಗಳನ್ನು ಹೊಂದಿದ್ದು, ಪಾಯಿಂಟ್ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂದ್ಯಾವಳಿಯಲ್ಲಿ ತೀರಾ ಕಳಪೆ ಪ್ರದರ್ಶನ ನೀಡಿದೆ. 9 ಪಂದ್ಯಗಳನ್ನು ಆಡಿದ್ದು, ಕೇವಲ 2 ರಲ್ಲಿ ಗೆದ್ದು, 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕಡೆಯ ಸ್ಥಾನದಲ್ಲಿದೆ.




