ಜೈಪುರ: ಪಂದ್ಯದಿಂದ ಪಂದ್ಯಕ್ಕೆ ಸುಧಾರಿತ ಪ್ರದರ್ಶನ ತೋರುತ್ತಿರುವ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಮತ್ತೊಂದು ಲೀಗ್ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವನ್ನು ಇಂದಿನ ಪಂದ್ಯದಲ್ಲಿ ಎದುರಿಸಲಿದೆ.
ಸ್ವಾಮಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಇಂದು ಸಾಯಂಕಾಲ 7:30 ಕ್ಕೆ ಪಂದ್ಯ ನಡೆಯಲಿದ್ದು, ಮುಂಬೈ ಇಂಡಿಯನ್ಸ್ 10 ಪಂದ್ಯಗಳಿಂದ 12 ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ರಾಜಸ್ತಾನ ರಾಯಲ್ಸ್ 10 ಪಂದ್ಯಗಳಿಂದ 6 ಅಂಕಗಳಿಸಿದ್ದು, 8 ನೇ ಸ್ಥಾನದಲ್ಲಿದೆ.




