Ad imageAd image

ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತನ ಬರ್ಬರ ಕೊಲೆ

Bharath Vaibhav
ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತನ ಬರ್ಬರ ಕೊಲೆ
WhatsApp Group Join Now
Telegram Group Join Now

ಮಂಗಳೂರು: ಮಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಕೊಲೆ ಮಾಡಲಾಗಿದೆ. ಸುಹಾಸ್ ಶೆಟ್ಟಿ ಕೊಲೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ.

ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸುಹಾಸ್ ಶೆಟ್ಟಿಯ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.

ಮಂಗಳೂರಿನ ಬಜಪೆ, ಕಿನ್ನಿಪದವು ಸಮೀಪ ಘಟನೆ ನಡೆದಿದೆ. 2022ರ ಜುಲೈ 28 ರಂದು ಫಾಜಿಲ್ ಕೊಲೆ ನಡೆದಿತ್ತು. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಹತ್ಯೆ ಮಾಡಲಾಗಿತ್ತು.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತನಾಗಿದ್ದ. ಸುಹಾಸ್ ಶೆಟ್ಟಿ. ಹಲವಾರು ಕೊಲೆ, ಕೊಲೆ ಯತ್ನ ಕೇಸ್ ನ ಆರೋಪಿಯಾಗಿದ್ದ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೌಡಿಶೀಟರ್ ಮತ್ತು ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಹಿನ್ನೆಲೆ ಮಂಗಳೂರಿನ ಎಜೆ ಆಸ್ಪತ್ರೆ ಬಳಿ ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಮಂಗಳೂರಿನ ಎಜೆ ಆಸ್ಪತ್ರೆಯ ಬಳಿ ಹಿಂದೂ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ.

ಎಜೆ ಆಸ್ಪತ್ರೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಭರತ್ ಶೆಟ್ಟಿ ಮೊದಲಾದವರು ಆಗಮಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!