ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 52 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ಇಂದು ಸಾಯಂಕಾಲ 7:30 ಕ್ಕೆ ನಡೆಯಲಿದ್ದು, ಪಂದ್ಯ ರಾಯಲ್ ಚಾಜೆಂಜರ್ಸ್ ಬೆಂಗಳೂರು ತಂಡಕ್ಕೆ ಮಾತ್ರ ಪ್ರಯೋಜನ ಇದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಪಂದ್ಯಾವಳಿಯಿಂದ ಹೊರ ಬಿದ್ದಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಪಂದ್ಯದಲ್ಲಿ ಗೆದ್ದರೆ ಅದು ಪಂದ್ಯಾವಳಿಯಲ್ಲಿ ತನ್ನ ಹಿಡಿತವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಾನಾಡಿದ 10 ಪಂದ್ಯಗಳಿಂದ 7 ರಲ್ಲಿ ಗೆದ್ದು 14 ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.




