Ad imageAd image

ಪ್ರಾಕೃತಿಕ ಸೌಹಾರ್ದತೆ ತುರ್ತು ಅಗತ್ಯ: ಉಪ ರಾಷ್ಟ್ರಪತಿ ಜಗದೀಪ್ ಧನಕರ್

Bharath Vaibhav
ಪ್ರಾಕೃತಿಕ ಸೌಹಾರ್ದತೆ ತುರ್ತು ಅಗತ್ಯ: ಉಪ ರಾಷ್ಟ್ರಪತಿ ಜಗದೀಪ್ ಧನಕರ್
WhatsApp Group Join Now
Telegram Group Join Now

ಕಾರವಾರ: ವೈದಿಕ ಯುಗದಿಂದಲೂ ಪರಿಸರ ಮತ್ತು ಅರ್ಥ ವ್ಯವಸ್ಥೆ ಪರಸ್ಪರ ಸಾಗಿದೆ. ಪರಿಸರ ನಾಶ ಮಾಡಿ ಅಭಿವೃದ್ಧಿ ಚಟುವಟಿಕ ನಡೆಸುವ ಬದಲು ಪ್ರಾಕೃತಿಕ ಸೌಹಾರ್ದ ತುರ್ತು ಅಗತ್ಯ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಪ್ರತಿಪಾದಿಸಿದರು.

ಶಿರಸಿಯ ಅರಣ್ಯ ಕಾಲೇಜು ಆವರಣದಲ್ಲಿ ಸೋಮವಾರ ‘ದೇಶ ಕಟ್ಟುವಿಕೆಯಲ್ಲಿ ಅರಣ್ಯ ವಿಜ್ಞಾನದ ಪಾತ್ರ’ ವಿಷಯದ ಕುರಿತಾಗಿ ಅರಣ್ಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

ನೈಸರ್ಗಿಕ ಸಂಪನ್ಮೂಲ ಬಳಸಿಕೊಂಡು ಅಭಿವೃದ್ಧಿ ಹೊಂದುವ ಗ್ರಾಹಕರು ನಾವಲ್ಲ. ಅವುಗಳನ್ನು ಮುಂದಿನ ಪೀಳಿಗೆಗೂ ಉಳಿಸಿಕೊಂಡು ಸಾಗುವತ್ತ ಯೋಚಿಸಬೇಕು ಎಂದು ಸಲಹೆ ನೀಡಿದರು.
ಪಶ್ಚಿಮ ಘಟ್ಟ ಜಗತ್ತಿನಲ್ಲೇ ಶ್ರೀಮಂತ ಜೀವ ವೈವಿಧ್ಯ ಹೊಂದಿರುವ ತಾಣ. ಇಂತಹ ವಾತಾವರಣದಲ್ಲಿ ವಿದ್ಯಾರ್ಥಿಗಳು ಗೋಡೆಯ ನಡುವೆ ಕಲಿಯುವುದಕ್ಕಿಂತ ವಿಸ್ತಾರ ಪ್ರದೇಶದಲ್ಲಿ ಕಲಿಯಬಹುದು ಎಂದರು. ಏಲಕ್ಕಿ, ದಾಲ್ಕಿನ್ನಿ, ಕಾಳುಮೆಣಸು ಸೇರಿದಂತೆ ಅನೇಕ ಮಸಾಲೆ ಉತ್ಪನ್ನ ಬೆಳೆಯುವ ಫಲವತ್ತಾದ ಭೂಮಿ ಇದಾಗಿದೆ. ಇಲ್ಲಿನ ಜನರು ಪರಿಸರದೊಂದಿಗೆ ಬದುಕುತ್ತಿದ್ದಾರೆ.

ಪ್ರಕೃತಿ ಕೇವಲ ಮಾನವನಿಗೆ ಸೀಮಿತವಾಗಿಲ್ಲ ಎಂಬ ಸತ್ಯವನ್ನು ಅರಿತುಕೊಳ್ಳಿ. ಪ್ರಾಣಿ ಪಕ್ಷಿಗಳಿಗೂ ಅದು ಮೀಸಲಾಗಿದೆ. ಈಗಿನ ಪೀಳಿಗೆ ಈ ಸತ್ಯದೊಂದಿಗೆ ಅಧ್ಯಯನ ನಡೆಸುತ್ತ, ಮುಂದಿನ ಪೀಳಿಗೆಗೂ ಅರಿವು ಮೂಡಿಸಬೇಕು ಎಂದರು.

ಅರಣ್ಯ ಶ್ವಾಸಕೋಶದಂತೆ, ಶ್ವಾಸಕೋಶ ಸರಿಯಾಗಿದ್ದರೆ ಉಸಿರಾಡಬಹುದು. ವಾತಾವರಣದ ಏರುಪೇರು ಜಗತ್ತಿಗೆ ಎಚ್ಚರಿಕೆ ನೀಡುತ್ತಿದೆ. ಈ ಸವಾಲು ಎದುರಿಸಲು ಪರಿಸರ ಉಳಿಸಬೇಕು. ಮನುಷ್ಯನ ಅತಿಯಾಸೆಗೆ ಪರಿಸರ ನಾಶವಾಗುತ್ತಿದ್ದರೆ ಭೂಮಿ ತಾಯಿ ಕ್ಷಮೆ ನೀಡಲಾರಳು ಎಂದು ಎಚ್ಚರಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!