Ad imageAd image

“ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ

Bharath Vaibhav
“ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ
WhatsApp Group Join Now
Telegram Group Join Now

ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದ ಸಮಗ್ರ ಅಭಿವೃದ್ಧಿ ಸಾಕಾರಕ್ಕಾಗಿ ರಾಜ್ಯ ಸರಕಾರವು ಜಾರಿಗೆ ತಂದಿರುವ “ಪಂಚ ಗ್ಯಾರಂಟಿ” ಯೋಜನೆಗಳ ಕುರಿತ ಕಿರುಪುಸ್ತಕವನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬಿಡುಗಡೆಗೊಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು ಗೋಕಾಕ ನಗರದ ಗೃಹ ಕಚೇರಿಯಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿರುತ್ತದೆ.

ಪ್ರತಿಯೊಂದು ಕುಟುಂಬಕ್ಕೂ ಗ್ಯಾರಂಟಿ ಯೋಜನೆಗಳು ತಲುಪಿದ್ದು, ಮಹಿಳೆಯರು, ಕಾರ್ಮಿಕರು ಸೇರಿದಂತೆ ಬಹುಜನರ ಜೀವನಮಟ್ಟ ಸುಧಾರಣೆಗೆ ಇದರಿಂದ ಅನುಕೂಲವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿಗಳಾದ ಬಸವರಾಜ ಹೆಗ್ಗನಾಯಕ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!