ಬೈಲಹೊಂಗಲ: ಅನೈತಿಕ ಸಂಬಂಧ ಇಟ್ಟುಕೊಂಡ ಹಿನ್ನಲೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮರಕಟ್ಟಿ ಗ್ರಾಮದ ಬಳಿ ಬುಧವಾರ ನಡೆದಿದೆ.
ಕೊಲೆಯಾದ ಯುವಕನನ್ನು ತಾಲೂಕಿನ ಹಣಬರಹಟ್ಟಿ ಗ್ರಾಮದ ಸದಾಶಿವ ಲಕ್ಕಪ್ಪ ಪವಾಡಿ (22) ಎಂದು ಗುರುತಿಸಲಾಗಿದೆ.
ದೊಡ್ಡಪ್ಪನ ಮಗ ಬಸಪ್ಪ ಪವಾಡಿ ಕೊಲೆ ಮಾಡಿ, ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ವೀರಯ್ಯ ಹಿರೇಮಠ, ಸಿಪಿಐ ಪಂಚಾಕ್ಷರಿ ಸಾಲಿಮಠ ಭೇಟಿ ನೀಡಿ ಪರಿಶೀಲಿಸಿ, ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.
ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




