Ad imageAd image

ಆಪರೇಷನ್ ಸಿಂಧೂರ ನಂತರ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ: ಸಿಎಂ ಸಿದ್ದರಾಮಯ್ಯ

Bharath Vaibhav
ಆಪರೇಷನ್ ಸಿಂಧೂರ ನಂತರ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಮಂಡ್ಯ: ಆಪರೇಷನ್ ಸಿಂಧೂರ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ತಮ್ಮ ಸರ್ಕಾರ ರಾಜ್ಯದಾದ್ಯಂತ ಎಚ್ಚರಿಕೆ ನೀಡಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ.

ಭದ್ರತಾ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ನೀಡಿದ ಸೂಚನೆಗಳನ್ನು ಪಾಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯದ ಅಣೆಕಟ್ಟುಗಳು ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ‘ನಾವು ಎಲ್ಲೆಡೆ ಎಚ್ಚರಿಕೆ ನೀಡಿದ್ದೇವೆ. ಏಕೆಂದರೆ, ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆಎಂದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸ್ಥಳಗಳಲ್ಲಿ ಮಾಕ್ ಡ್ರಿಲ್ಗಳನ್ನು ನಡೆಸಲಾಗುತ್ತಿದೆ ಮತ್ತು ಕೇಂದ್ರವು ನೀಡಿದ ಸೂಚನೆಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಇನ್ನೂ ಇರುವ ಕೆಲವು ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ಬಹುತೇಕ ಎಲ್ಲರೂ ಹೋಗಿದ್ದಾರೆ. ಮೈಸೂರಿನ ಒಂದು ಕುಟುಂಬ ನ್ಯಾಯಾಲಯದ ಮೊರೆ ಹೋಗಿದೆ. ಅಂತಹ ಪ್ರಕರಣಗಳು ಮಾತ್ರ ಇನ್ನೂ ಇರಬಹುದು. ಇನ್ನುಳಿದ ಎಲ್ಲರೂ ಹೋಗಿದ್ದಾರೆ. ರಾಜ್ಯದಲ್ಲಿ ಇನ್ನೂ ಎಷ್ಟು ಪಾಕಿಸ್ತಾನಿಗಳಿದ್ದಾರೆ ಎಂಬುದರ ಬಗ್ಗೆ ನನಗೆ ನಿಖರವಾದ ಮಾಹಿತಿ ಇಲ್ಲಎಂದು ಹೇಳಿದರು.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲ ದೇವಾಲಯಗಳಲ್ಲಿ ಸಶಸ್ತ್ರ ಪಡೆಗಳ ಯೋಗಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆಗಳನ್ನು ನಡೆಸುವಂತೆ ರಾಮಲಿಂಗಾರೆಡ್ಡಿ ಸೂಚನೆಗಳನ್ನು ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!