Ad imageAd image

ಬಾಲಕಿ ಮೇಲೆ ಅತ್ಯಾಚಾರ: ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ

Bharath Vaibhav
ಬಾಲಕಿ ಮೇಲೆ ಅತ್ಯಾಚಾರ: ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆ
WhatsApp Group Join Now
Telegram Group Join Now

ಕಲಬುರಗಿ: ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದರಿಂದ ತಾಲ್ಲೂಕಿನ ತಾಂಡಾವೊಂದರ ನಿವಾಸಿ ಸೋನು ತಾರಾಸಿಂಗ್ ಜಾಧವ್ (19) ಎಂಬಾಷವಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇ ಷ ಫೋಕ್ಕೂ) ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 1 30 ಸಾವಿರ ದಂಡ ವಿಧಿಸಿದೆ.

2024ರ ಆಗಸ್ಟ್ 9ರಂದು ಮನೆಯಲ್ಲಿ ಜೋಕಾಲಿ ಆಡುತ್ತಿದ್ದ ಬಾಲಕಿಯನ್ನು ‘ಗಿಡಗಳಿಗೆ ನೀರು ಹಾಕೋಣ’ ಎಂದು ಪುಸಲಾಯಿಸಿ ಆಕೆಯ ಚಿಕ್ಕಪ್ಪನಾದ ಸೋನು ಮನೆಯ ಮೇಲಿನ ಕೊಂಡಿಗೆ ಕರೆದೊಯು ಬಾಯಿಗೆ ಬಟ್ಟೆ ಮರುತಿ ಅತ್ಯಚಾರ ಎಸಗಿದ್ದಾನೆ’ ಎಂದು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ‘ನನ್ನ ಮಗನಿಂದ ತಪ್ಪಾಗಿದೆ. ಬಾಲಕಿಗೆ ತಾಳಿ ಕಟ್ಟಿ ಕರೆದುಕೊಂಡು ಹೋಗಲು ತಯಾರಿದ್ದೇವೆ’ ಎಂದು ಸೋನು ಪೋಷಕರು ಹೇಳಿದ್ದರು. ‘ಸೋಮಗೆ ಬಾಲಕಿ ಅಣ್ಣನ ಮಗಳಾಗಬೇಕು. ಆತನೊಂದಿಗೆ ಹೇಗೆ ಮದುವೆ ಮಾಡಲು ಸಾಧ್ಯ’ ಎಂದು ಪ್ರಶ್ನಿಸಿದ್ದ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು.

ಪಿಎಸ್‌ಐ ರೇಣುಕಾದೇವಿ ಹಾಗೂ ಪಿಐ ಸುಶೀಲಕುಮಾರ್ ಅವರು ಸೋನು ಜಾಧವ್ ವಿರುದ್ಧ ಬಿಎನ್‌ಎಸ್‌ ಕಾಯ್ದೆ ಹಾಗೂ ಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋವ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು, ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ದಂಡದ ಮೊತ್ತವನ್ನು ವಾವತಿಸಲು ವಿಫಲನಾದರೆ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರ .

ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 27 ಲಕ್ಷ ಪರಿಹಾರವನ್ನು ಒಂದು ತಿಂಗಳ ಒಳಗೆ ನೀಡಬೇಕು ಎಂದು ಆದೇಶದಲ್ಲಿ ವಿಳಿಸಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀದ ಬಿ. ಮಹ್ಮದ ವಾದ ಮಂಡಿಸಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!