ಮೈಸೂರು : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣ ಜಾರಕಿಹೊಳಿ ಅವರು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜರುಗಿದ ಲೋಕೋಪಯೋಗಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಮತ್ತು ನೂತನ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವರಾದ ವೆಂಕಟೇಶ್ , ಚಾಮರಾಜನಗರ ಸಂಸದರಾದ ಸುನೀಲ್ ಬೋಸ್, ಕೆ. ಆರ್.ನಗರ ಶಾಸಕರಾದ ಡಿ. ರವಿ ಶಂಕರ್ ,ಗುಂಡ್ಲುಪೇಟೆ ಶಾಸಕರಾದ ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಡಿ. ತಿಮ್ಮಯ್ಯ ,ಜ್ಞಾನ ಪ್ರಕಾಶ ಸ್ವಾಮೀಜಿಗಳು ಹಾಗೂ ವಿವಿಧ ಸಂಘಟನೆಗಳ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




