ತಿಪಟೂರು : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಷನ್ ಮತ್ತು ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಮೇ 21 ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಆವರಣದಲ್ಲಿ ಪ್ಲೇಸ್ಮೆಂಟ್ ಸೆಲ್ ಮತ್ತು ಐಕ್ಯೂಎಸಿ ವಿಭಾಗದ ನೇತೃತ್ವದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಹೆಚ್.ಬಿ.ಕುಮಾರಸ್ವಾಮಿ ತಿಳಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ., ಪಿಯುಸಿ ಹಾಗೂ ಪದವಿ ಕೊನೆಯ ವರ್ಷದ ವಿದ್ಯಾರ್ಥೀಗಳು, ಡಿಪ್ಲೊಮೊ, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ 2023-2024 ರಲ್ಲಿ ಪಾಸಾದ ವಿದ್ಯಾರ್ಥಿಗಳು ಮತ್ತು ಹಿಂದಿನ ಬ್ಯಾಚ್ ನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಅವಕಾಶವಿದೆ. ಉದ್ಯೋಗ ಮೇಳದಲ್ಲಿ 30 ಕ್ಕೂ ಹೆಚ್ಚು ಕಂಪನಿಗಳು ಆಗಮಿಸುತ್ತಿದ್ದು, 2500 ಕ್ಕೂ ಉದ್ಯೋಗ ಆಕಾಂಕ್ಷಿಗಳು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.
ಶಾಸಕ ಷಡಕ್ಷರಿ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ನಿರುದ್ಯೋಗಿ ವಿದ್ಯಾವಂತರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಇದೊಂದು ಪ್ರಾಮಾಣಿಕ ಪ್ರಯತ್ನ ಕಾಲೇಜಿನ ವತಿಯಿಂದ ಮಾಡಲಾಗುತ್ತಿದೆ ಎಂದ ಅವರು, ಉದ್ಯೋಗ ಮೇಳಕ್ಕೆ ಆಗಮಿಸುವ ಆಕಾಂಕ್ಷಿಗಳು ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಅಂಕಪಟ್ಟಿ, ಪಾಸ್ ಪೋರ್ಟ್ ಅಳತೆಯ ವರ್ಣರಂಜಿತ ಭಾವಚಿತ್ರ, ಆಧಾರ್ ಕಾರ್ಡ್, ಪದವಿ ವ್ಯಾಸಂಗ ಮಾಡುತ್ತಿರುವವರು ಅಂತಿಮ ವರ್ಷದ ಅಂಕಪಟ್ಟಿ ಮೂಲ ಹಾಗೂ ಜೆರಾಕ್ಸ್ ಪ್ರತಿಗಳನ್ನು ತರಬೇಕೆಂದು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಹೆಚ್.ಕೆ.ಕುಮಾರಸ್ವಾಮಿ ಪ್ರಾಂಶುಪಾಲರು ಹಾಗೂ ಪ್ಲೇಸ್ ಮೆಂಟ್ ಸೆಲ್ ಕೋಆರ್ಡಿನೇಟರ್ ನಾಗರಾಜು ಮೊ: 9964973464, 9880155613, 7483169495ಗೆ ಸಂಪರ್ಕಿಸಲು ಕೋರಿದ್ದಾರೆ.
ವರದಿ: ಗಿರೀಶ್ ಕೆ ಭಟ್




