ರಾಯಚೂರು : ಮರಣ ಪ್ರಮಾಣ ಶೂನ್ಯಕ್ಕಿಳಿಯಲಿ: ರಾಜ್ಯದ ಯಾವುದೇ ಕಡೆಗಳಲ್ಲಿ ಗರ್ಭಿಣಿಯರು ಮತ್ತು ಶಿಶುಗಳು ಮರಣ ಆಗದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಮಾನ್ಯ ಮುಖ್ಯಮಂತ್ರಿಗಳು ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲ ಪ್ರಾಥಮಿಕ, ಸಮುದಾಯ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಗರ್ಭೀಣಿಯರ ಮತ್ತು ಶಿಶು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕು. ನಿರ್ಲಕ್ಷಯ ಮಾಡಬಾರದು. ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಗರ್ಭಿಣಿಯರಿಗೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಲಭ್ಯವಾಗುವಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಮಾಡಬೇಕು ಎಂದು ಕಾರ್ಯದರ್ಶಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಯಚೂರ ಜಿಲ್ಲೆಯಲ್ಲಿ ಗರ್ಭಿಣಿಯರ ಮರಣ ಪ್ರಕರಣಗಳು ಸಂಭವಿಸದAತೆ ಮುನ್ನೆಚ್ಚರಿಕೆ ಕ್ರಮವಾಗಿ
ವಿಶೇಷ ತಜ್ಞವೈದ್ಯರ ತಂಡವೊಂದು ಈ ಬಗ್ಗೆ ನಿಗಾವಹಿಸಿ ಕಾರ್ಯನಿರ್ವಹಿಸುತ್ತಿದೆ. ತುರ್ತು ಚಿಕಿತ್ಸೆ ಅವಶ್ಯಕತೆ ಕಾಣಿಸುವ ಗರ್ಭಿಣಿಯರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಕ್ರಮವಹಿಸಲಾಗುತ್ತಿದೆ. ತಾಯಂದಿರ ಮರಣ ತಡೆಗೆ ಸಂಬಂಧಿಸಿದಂತೆ ನರ್ಸಗಳಿಗೆ ತರಬೇತಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ತಿಳಿಸಿದರು.
ಸಿಎಸ್‌ಆರ್ ಫಂಡನಲ್ಲಿ 8 ಡಯಾಲಿಸಿಸ್ ಮಸೀನ್ ಖರೀದಿಸಲಾಗಿದೆ. ತಾಯಂದಿರ ಮರಣ ತಗ್ಗಿಸುವ ಭಾಗವಾಗಿ ಉಪ ಕೇಂದ್ರಗಳಲ್ಲಿ ಈಗಾಗಲೇ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಕಳೆದ ವರ್ಷ ಲಿಂಗಸೂರ ತಾಲೂಕಿನಲ್ಲಿ ಮಲೇರಿಯಾ ಪ್ರಕರಣಗಳು ವರದಿಯಾಗಿದ್ದವು.
ಈ ಬಾರಿ ಯಾವುದೇ ಕಡೆಗಳಲ್ಲಿ ಮಲೇರಿಯಾ, ಚಿಕೂನ್‌ಗುನ್ಯ, ಡೆಂಗೆ ಪ್ರಕರಣಗಳು ವರದಿಯಾಗಿಲ್ಲ. ದೇವದುರ್ಗ ತಾಲೂಕಿನ ಬಹುತೇಕ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರ ಕೊರತೆಯಾಗಿದೆ ಎಂದು ಡಿಎಚ್‌ಓ ಅವರು ಸಭೆಗೆ ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ, ರಾಯಚೂರ ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪತ್ರ, ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು
ವರದಿ : ಗಾರಲದಿನ್ನಿ ವೀರನ ಗೌಡ




