ಹುಕ್ಕೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕ, ಕರ್ನಾಟಕ ಟೈಮ್ಸ್ ಕನ್ನಡ ದಿನಪತ್ರಿಕೆ ಹಾಗೂ ಶ್ರೀ ಲಕ್ಷ್ಮೀ ಎಜುಕೇಷನ್ ಟ್ರಸ್ಟ್‌ನ ಸಂಯುಕ್ತ ಆಶ್ರಯದಲ್ಲಿ ಹುಕ್ಕೇರಿ ಪಟ್ಟಣದಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದರು.

ಈ ವೇಳೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಪತ್ರಕರ್ತರ ಮಕ್ಕಳಿಗೆ ಹಾಗೂ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರಿಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸರ್ವೋತ್ತಮ ಅಣ್ಣಾ ಜಾರಕಿಹೊಳಿ, ಸನತ್ ಅಣ್ಣಾ ಜಾರಕಿಹೊಳಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ಕುರಂದವಾಡೆ ಅವರು ಸೇರಿ ಅನೇಕರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




